ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸರ್ವ ಸಜ್ಜು…
ಶಿವಮೊಗ್ಗ: ಮಾ.೩೧ ರಿಂದ ಏ.೧೫ರವರೆಗೆ ಜಿಯ ಒಟ್ಟು ೯೪ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ವಾದ ಸಕಲ ಸಿದ್ದತೆ ಮಾಡಿಕೊಳ್ಳಲಾ ಗಿದೆ ಎಂದು ಜಿಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.
ಸರ್ಕಾರಿ ನೌಕರರ ಭವನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಪರೀಕ್ಷಾ ಅಧಿಕಾರಿ ಗಳೊಂದಿಗೆ ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಟ್ಟು ೯೪ ಪರೀಕ್ಷಾ ಕೇಂದ್ರ ಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ ೨ ಖಾಸಗಿ ಪರೀಕ್ಷಾ ಕೇಂದ್ರ ಗಳಿವೆ. ಒಟ್ಟು ೨೩,೩೭೨ ವಿದ್ಯಾರ್ಥಿ ಗಳು ಪರೀಕ್ಷೆ ಬರೆಯುತ್ತಿದ್ದು, ೨೨,೦೬೮ ರೆಗ್ಯೂಲರ್ ವಿದ್ಯಾರ್ಥಿ ಗಳು, ೮೧೪ ಪುನರಾವರ್ತಿತ ವಿದ್ಯಾರ್ಥಿಗಳು, ೩೫೭ ಖಾಸಗಿ ಯಾಗಿ ನೊಂದಾಯಿಸಿ ವಿದ್ಯಾರ್ಥಿ ಗಳು, ೧೩೩ ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿzರೆ.
೯೪ ಸ್ಥಾನಿಕ ಜಗತ ದಳದ ಅಧಿಕಾರಿಗಳು, ೯೪ ಮುಖ್ಯ ಅಧೀಕ್ಷಕರು, ೩೧ ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಯಲ್ಲಿ ೩೩ ಮಾರ್ಗಗಳನ್ನು ರಚಿಸಲಾಗಿದ್ದು, ೩೩ ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿ ಗಳ ಸಂಖ್ಯೆ ೩೫೦ ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಯಲ್ಲಿ ಒಟ್ಟು ೧೧ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಸಂಬಂಧಿಸಿದ ಬಿಇಓಗಳು ಪರಿಶೀಲಿಸಿ ವರದಿ ನೀಡಿರುತ್ತಾರೆ. ಪರೀಕ್ಷಾ ಕೇಂದ್ರ ಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿ ಟಿವಿ ಇಲ್ಲದ ಕಡೆ ಅದಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.
ಕೆಲವು ಹಳ್ಳಿಗಳಲ್ಲಿ ವಿದ್ಯಾರ್ಥಿ ಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇರುವು ದಿಲ್ಲ ಅಥವಾ ಬಸ್ ನಿಲುಗಡೆ ಇರುವುದಿಲ್ಲ. ಇಂತಹ ಸಮಸ್ಯೆ ಗಳನ್ನು ತಾಲೂಕುಗಳ ಬಿಇಓಗಳು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು. ಅಂತಹ ಕಡೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ ಮೀ. ಫಾಸಲೆಯಲ್ಲಿ ನಿಷೇಧಾe ಜರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳು ಅತ್ಯಂತ ಮುತುವರ್ಜಿಯಿಂದ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರೆ ಸೂಚನೆಗಳ ಕುರಿತು ತಿಳುವಳಿಕೆ ನೀಡಬೇಕು.
ಯಾವುದೇ ರೀತಿಯ ಅಡಚಣೆ, ಅವ್ಯವಸ್ಥೆ ಆಗದಂತೆ ವ್ಯವಸ್ಥಿತವಾಗಿ ಮತ್ತು ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಅಗತ್ಯ ವಾದ ಎಲ್ಲ ಕ್ರಮಗಳನ್ನು ಕೈಗೊಂಡು, ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿ ಗಳಿಗೆ ಸೂಚನೆ ನೀಡಿದರು.
ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಯ ಮುಖ್ಯ ಅಧೀಕ್ಷಕರು, ಸಹಾಯಕ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಗತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಮತ್ತು ವೀಕ್ಷಕರು ಅನುಸರಿಸ ಬೇಕಾದ ಮಾರ್ಗಸೂಚಿ ಕುರಿತು ಹೇಳಿದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಬಸವರಾಜಪ್ಪ, ಖಜನೆ ಉಪ ನಿರ್ದೇಶಕಿ ಸಾವಿತ್ರಿ, ಬಿಇಓಗಳು, ಇತರೆ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.