ಅವಕಾಶಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಸಾಧನೆ ಸಾಧ್ಯ: ಉಮೇಶ್ ಹಾಲಾಡಿ

ಶಿವಮೊಗ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿ ಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.


ನಗರದ ಅಂಬೇಡ್ಕರ್ ಭವನ ದಲ್ಲಿ ಎಟಿಎನ್‌ಸಿಸಿ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಗೌರವ ಸಮರ್ಪಣೆ, ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಭೆ ಪ್ರದರ್ಶಿಸಲು ಸಿಗುವ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಂಡು ಹಂತ ಹಂತವಾಗಿ ಸಾಧನೆ ಮಾಡಬೇಕು. ಉತ್ತಮ ಜೀವನ ರೂಪಿಸಿಕೊಳ್ಳಲು ಸಾಂಸ್ಕೃತಿಕ ವೇದಿಕೆ ಸಹಕಾರಿ ಯಾಗುತ್ತದೆ ಎಂದು ತಿಳಿಸಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಸ್ವಾಮಿ ಎಂ.ಟಿ. ಮಾತನಾಡಿ, ವಿದ್ಯಾರ್ಥಿ ಗಳು ಸರ್ಕಾರದಿಂದ ಸಿಗುವ ಸೌಲಭ್ಯ ಹಾಗೂ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಸಾಧನೆ ಮಾಡುವುದಕ್ಕೆ ನೆರವಾಗುವ ಅಂಶಗಳ ಬಗ್ಗೆ ಆದ್ಯತೆ ನೀಡಬೇಕು. ಶಿಕ್ಷಣದ ನಂತರ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.
ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ. ವಿಜಯ್ ಕುಮಾರ್ ಮಾತನಾಡಿ, ಆಧುನಿಕ ಯುಗದಲ್ಲಿ ತಂತ್ರeನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ತಂತ್ರeನದ ನೆರವಿನಿಂದ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಟಿಎನ್‌ಸಿಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉನ್ನತ ಸಾಧನೆ ಮಾಡಿzರೆ. ಶಿವಮೊಗ್ಗ ಜಿಯ ಕೀರ್ತಿಯನ್ನು ವಿದ್ಯಾರ್ಥಿಗಳು ಹೆಚ್ಚಿಸಿzರೆ ಎಂದು ತಿಳಿಸಿದರು.
ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹು ಮಾನ, ಪ್ರಶಸ್ತಿ ಪತ್ರ ವಿತರಿಸಲಾ ಯಿತು. ಸಮಾರಂಭದಲ್ಲಿ ಪ್ರೊ. ಜಗದೀಶ್, ಪ್ರೊ. ಕೆ.ಎಂ. ನಾಗರಾಜು, ಗಾಯತ್ರಿ, ಪ್ರವೀಣ್. ಬಿ.ಎನ್., ಗಿರಿಜ ಹೊಸಮನಿ, ಲಲಿತಾ, ಸಿಬ್ಬಂದಿ ಉಪಸ್ಥಿತರಿದ್ದರು.