ಪೂರ್ಣ ಬಹುಮತದೊಂದಿಗೆ ಬಿಜೆಪಿಗೆ ಅಧಿಕಾರ ನೀಡಿ: ಶೋಭಾ ಕರಂದ್ಲಾಜೆ

ಶಿವಮೊಗ್ಗ: ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾ ಡಿದ ಅವರು, ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದರು. ಅವರನ್ನು ಸೇರಿಸಿಕೊಂಡು ಸರ್ಕಾರ ಮಾಡುವ ಹೊಣೆಗಾರಿಕೆ ಬಿಜೆಪಿ ಯದ್ದಾಗಿತ್ತು. ಆದರೆ ಈ ಬಾರಿ ಅಂತಹ ಸ್ಥಿತಿ ನಿರ್ಮಾಣ ಮಾಡದೆ ಬಿಜೆಪಿಗೆ ಬಹುಮತ ನೀಡುವಂತೆ ಕೋರಿದರು.
ಈ ಬಾರಿ ಚುನಾವಣೆ ಅಭಿ ವೃದ್ದಿ ಆಧಾರದ ಮೇಲೆ ನಡೆ ಯುತ್ತಿದ್ದು, ಲೋಕಸಭೆ ಚುನಾ ವಣೆಗೆ ಶಕ್ತಿ ತುಂಬುವುದು, ರಾಜ್ಯ ದಲ್ಲಿ ಅಪೂರ್ಣ ಕಾಮಗಾರಿಗಳನ್ನು ಪೂರ್ಣ ಮಾಡುವುದು ಪ್ರಮುಖ ಆದ್ಯತೆ ಆಗಿದೆ. ನಮ್ಮ ನಾಯಕರು ಮಾಡಿದ ಶಿಲಾನ್ಯಾಸಗಳನ್ನು ಪೂರ್ಣ ಮಾಡುವುದೇ ಮೆದಲ ಆದ್ಯತೆಯಾಗಿದೆ ಎಂದರು.
ಕಳೆದ ೯ ವರ್ಷಗಳಲ್ಲಿ ತಂತ್ರ ಜನ ಬಳಕೆ ಮಾಡಿಕೊಂಡು ಅಭಿ ವೃದ್ಧಿ ಮಾಡಲಾಗುತ್ತಿದೆ. ಅಭಿವೃದ್ಧಿ ಕೊಂಡಿ ಎಲ್ಲಿಯೂ ಸಡಿಲವಾಗ ಬಾರದು. ಹಿಂದೆ ಯೋಜನೆಗಳು ೪೦ ವರ್ಷವಾದರೂ ಪೂರ್ಣವಾ ಗುತ್ತಿರಲಿಲ್ಲ. ಒಂದು ಯೋಜ ನೆಯ ಹಣವನ್ನು ಬೇರೆ ಉದ್ದೇಶ ಗಳಿಗೆ ಬಳಸಲಾಗುತಿತ್ತು. ಆದರೆ ಈಗ ಆ ಸ್ಥಿತಿ ಇಲ್ಲ ಎಂದರು.
ವಸತಿ, ಕುಡಿಯುವ ನೀರು, ರೈಲ್ವೆ, ಹೆದ್ದಾರಿ, ನೀರಾವರಿ ಯೋಜನೆ, ವಿಮಾನ ನಿಲ್ದಾಣಗಳು ನಿರ್ಮಾಣ ವಾಗಿವೆ. ರಾಜ್ಯದಲ್ಲಿ ೫೪ ಲಕ್ಷ ರೈತರು ಕಿಸಾನ್ ಸಮ್ಮನ್ ಯೋಜನೆಯ ಲಾಭ ಪಡೆಯುತ್ತಿ ದ್ದಾರೆ. ದೇಶದ ರಕ್ಷಣೆ ಅಗತ್ಯವಾ ಗಿದೆ. ಯಾವುದೇ ಯೋಜನೆ ಯನ್ನು ಕೇಂದ್ರ ನೇರವಾಗಿ ಜರಿ ಮಾಡುವುದಿಲ್ಲ. ರಾಜ್ಯ ಸರ್ಕಾರ ಗಳು ಭೂಮಿ ನೀಡಬೇಕು. ಈ ನಿಟ್ಟಿನಲ್ಲಿ ಡಬಲ್ ಇಂಜಿನ್ ಸರ್ಕಾ ರ ಕೆಲಸ ಮಾಡುತ್ತಿದೆ. ಮತ್ತೊಮ್ಮೆ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಪ್ರಧಾನಿ ಮೋದಿಯವರು ಈಗಾಗಲೇ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಇನ್ನು ಕೆಲವು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಕಾರ್ಯಕರ್ತರಲ್ಲಿ ಕಾರ್ಯಕರ್ತ ರಾಗಿ ಮೋದಿ ಕೆಲಸ ಮಾಡುತ್ತಿ ದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿ ಯವರನ್ನು ಅವಹೇಳನ ಮಾಡಿ ಮಾತನಾಡುತ್ತಿರುವುದು ಬೇಸರ ತರಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಂ.ಬಿ. ಭಾನು ಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ಕೆ.ಜಿ. ಕುಮಾರಸ್ವಾಮಿ, ಶಿವ ರಾಜ್, ಕೆ.ವಿ.ಅಣ್ಣಪ್ಪ, ಶ್ರೀನಾಥ್, ಶರತ್ ಕಲ್ಯಾಣಿ ಇದ್ದರು.