ಖೇಣಿ ಮನೆಯಲ್ಲಿ ಕೇಂದ್ರ ಸರ್ಕಾರದ ೯ವರ್ಷಗಳ ಸಾಧನೆಗಳ ಕರಪತ್ರ ವಿತರಿಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಕಳೆದ ೯ ವರ್ಷಗಳಲ್ಲಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಅಭೂತಪೂರ್ವ ಅಭಿವೃದ್ದಿಯನ್ನು ಕಂಡಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಕೇಂದ್ರ ಸರ್ಕಾರ ೯ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಾಸಂಪರ್ಕ ಅಭಿಯಾನದ ಅಡಿಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ಸಾರ್ವಜನಿಕರಿಗೆ ವಿತರಿಸಿ ಮಾತನಾಡಿದ ಅವರು, ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ ೯ ವರ್ಷಗಳಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೇ ಅಲ್ಲದೇ ಮೋದಿ ಅವರು ವಿಶ್ವಮೆಚ್ಚಿದ ಎನಿಸಿಕೊಂಡಿzರೆಂದರು.
ಕೇಂದ್ರ ಸರ್ಕಾರ ೯ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ಪ್ರತಿಯೊಂದು ಮನೆಗಳಿಗೆ ತಲುಪಿಸಿ ಅವುಗಳ ಬಗ್ಗೆ ಜನರಿಗೆ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.
ಖೇಣಿಮನೆಯಲ್ಲಿ ಕರಪತ್ರ ವಿತರಿಸಿದ ರೇಣುಕಾಚಾರ್ಯ :
ಮಾಜಿ ಸಚಿವ ರೇಣುಕಾಚಾರ್ಯ ಏನೇ ಮಾಡಿದರೂ ಅದರಲ್ಲಿ ವಿಶೇಷತೆ ಇರುತ್ತದೆ, ಕೇಂದ್ರ ಸರ್ಕಾರ ೯ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಿಗೆ ತಲುಪಿಸುವ ಕೆಲಸವನ್ನು ರೇಣುಕಾಚಾರ್ಯ ಮಾಡುತ್ತಿzರ ಲ್ಲದೇ ಜನರಿಗೆ ಕೇಂದ್ರ ಸರ್ಕಾರದ ಜನಪರ ಕೆಲಸಗಳ ಬಗ್ಗೆ ತಿಳಿಸುತ್ತಿzರೆ.
ಅದೇ ರೀತಿ ಕೂಲಂಬಿ ಗ್ರಾಮದ ಖೇಣಿ ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ ಅಡಿಕೆ ಸುಲಿಯುತ್ತಿದ್ದ ಮಹಿಳೆಯರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರವನ್ನು ನೀಡಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಕೈಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಕೂಲಂಬಿ ಗ್ರಾಮದ ಮುಖಂಡರು, ಕಾರ್ಯಕರ್ತರು ಉಪಸ್ಥಿತರರಿದ್ದರು.