ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ವಿಸ್ತರಣೆ : ಬಿವೈಆರ್
ಶಿವಮೊಗ್ಗ : ಇಲ್ಲಿನ ಕೇಂದ್ರೀಯ ವಿದ್ಯಾಲಯ ವನ್ನು ವಿಸ್ತರಿಸಲು ಕೇಂದ್ರ ಸರ್ಕಾರವು ಅನುಮೋದನೆ ನೀಡಿದ್ದು, ಎ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ತೆರೆಯಲಾಗುತ್ತದೆ. ಈ ನಿರ್ಧಾರವು ಕ್ಷೇತ್ರದ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಮಹತ್ವದ ಹೆಜ್ಜೆಯಾಗಿರುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಕೇಂದ್ರೀಯ ವಿದ್ಯಾಲಯದಲ್ಲಿ ದಾಖಲಾತಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಶೈಕ್ಷಣಿಕ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರದ ಶಿಕ್ಷಣ ಸಚಿವಾಲಯಕ್ಕೆ ತಾವು ವಿನಂತಿಸಿಕೊಂಡಿದ್ದು, ತಮ್ಮ ಮನವಿ ಪರಿಶೀಲನೆಯ ನಂತರ, ಸಚಿವಾಲಯವು ಅಗತ್ಯವಿದ್ದ ವಿಸ್ತರಣೆಗೆ ಅನುಮೋದನೆ ನೀಡಿದ್ದು, ಇದರಿಂದ ಜಿಗೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಬಂದಷ್ಟೇ ಸಂತೋಷ ವಾಗಿದೆ ಎಂದು ತಿಳಿಸಿzರೆ.
ಶಿವಮೊಗ್ಗ ಜಿಯ ಕೇಂದ್ರೀಯ ವಿದ್ಯಾಲಯಲಯಕ್ಕೆ ಎ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ಸೇರಿಸಲು ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಬಿವೈಆರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.