ಜಿ.ಎಂ. ವಿದ್ಯಾ ಸಂಸ್ಥೆಯಲ್ಲಿ ಮತಯಾಚಿಸಿದ ಡಾ| ಸರ್ಜಿ…

sirji-mg-public-school

ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು. ಶಾಸಕ ಯಶ್ ಪಾಲ್ ಸುವರ್ಣ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.