ಜೆ.ಎನ್.ಎನ್.ಸಿ.ಇ : ವಿಟಿಯು ಫೆಸ್ಟ್ ರನ್ನರ್ ಅಪ್…
ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವತಿಯಿಂದ ಚಿಕ್ಕಬಳ್ಳಾಪುರದ ಎಂ.ಸಿ.ಇ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ‘ವಿಟಿಯು ಫೆಸ್ಟ್ ಸಾಂಸ್ಕೃತಿಕ ಯುವೋತ್ಸವ – ೨೦೨೩’ ಕಾರ್ಯಕ್ರಮದಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುವುದರ ಮೂಲಕ ೨ ಚಿನ್ನ, ೨ ಬೆಳ್ಳಿ, ೫ ಕಂಚಿನ ಪದಕಗಳನ್ನು ಪಡೆದು ೩ ನೇ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿzರೆ.
ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಮೊದಲ ಸ್ಥಾನ, ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮೊದಲ ಸ್ಥಾನ, ಜಾನಪದ ಆರ್ಕೆಸ್ಟ್ರಾ ಸ್ಪರ್ಧೆಯಲ್ಲಿ ಎರಡನೇ ಬಹುಮಾನ, ಕೊಲಾಜ್ ಸ್ಪರ್ಧೆಯಲ್ಲಿ ಎರಡನೇ ಬಹುಮಾನ, ತಾಳ ವಾದ್ಯದಲ್ಲಿ ಮೂರನೇ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಮೂರನೇ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ಮೂರನೇ ಸ್ಥಾನ, ಕ್ಲೆ ಮಾಡಲಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ, ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿzರೆ. ಕಾಲೇಜಿನ ವಿವಿಧ ವಿಭಾಗಗಳ ಮೂವತ್ತೈದು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು ೮೦ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದರು. ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಮಧುಸೂದನ್ ಗೊಲ್ಲ, ಅಕ್ಷತಾ, ಹರೀಶ್, ಡಾ. ಸುಭದ್ರಾ ವಿದ್ಯಾರ್ಥಿಗಳ ತಂಡಗಳನ್ನು ಸಂಯೋಜಿಸಿದ್ದರು. ಈ ಎಲ್ಲಾ ಪ್ರತಿಭಾನ್ವಿತರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿzರೆ.