ತಂಬಾಕುಮುಕ್ತ ಜಾಗೃತಿ ವಾಕಥಾನ್‌ಗೆ ಚಾಲನೆ…

tambaku

ಶಿವಮೊಗ್ಗ: ತಂಬಾಕು ಮುಕ್ತ ಯುವ ಅಭಿಯಾನ ೨.೦ ಜಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಇನ್ನಿತರ ಇಲಾಕೆ ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ನ್ಯಾಯಾಧೀಶರು, ಭಾರತದಲ್ಲಿ ತಡೆಗಟ್ಟಬಹುದಾದದ ರೋಗಗಳು ಮತ್ತು ಸಾವಿಗೆ ತಂಬಾಕು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಇದರ ಪರಿಣಾಮವಾಗಿ ವಾರ್ಷಿಕವಾಗಿ ೧.೩೫ ಮಿಲಿಯನ್ ಸಾವುಗಳು ಸಂಭವಿಸು ತ್ತಿದೆ. ಮಕ್ಕಳು ಹದಿಹರೆಯದರಲ್ಲೇ ಸೇವನೆ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ ಎಂದರು.


ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ಜಿಲ್ಲೆಯಲ್ಲಿ ಒಟ್ಟು ೧೬೦ ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲು ಗುರಿ ನಿಗದಿಪಡಿಸಿದ್ದು,ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಒಟ್ಟು ೨೦ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸಲು ಗುರಿ ನಿಗದಿಪಡಿಸಲಾಗಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಟರಾಜ್ ಅವರು ಮಾತನಾಡಿ, ಆರೋಗ್ಯ ಇಲಾಖೆ ವತಿಯಿಂದ ಈ ಅಭಿಯಾನಕ್ಕೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸೂಚನೆಗಳನ್ನು ಎಲ್ಲಾ ಇಲಾಖೆಗಳಿಗೆ ನೀಡುವ, ಪ್ರಚಾರ ಮಾಡುವ ಹಾಗೂ ಪ್ರತಿ ದಿನದ ಚಟುವಟಿಕೆಗಳನ್ನು ಭಾರತ ಸರ್ಕಾರದ ಎಂಐಎಸ್ ಪೋರ್ಟಲ್ ನಲ್ಲಿ ನಮೂದಿಸಬೇಕಾಗಿದ್ದು, ತಂಬಾಕು ಮುಕ್ತ ಯುವ ಅಭಿಯಾನ ೨.೦ ಅನ್ನು ಯಶಸ್ವಿಗೊಳಿ ಸಲು ಎಲ್ಲಾ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಥಾ ನೆಹರು ಕ್ರೀಡಾಂಗಣದಿಂದ ಹೊರಟು, ಗೋಪಿ ವೃತ್ತ ಮತ್ತು ಜಿಲ್ಲಾ ಪಂಚಾಯತ್ ರಸ್ತೆ ಮೂಲಕ ನೆಹರು ಕ್ರೀಡಾಂಗಣದಲ್ಲಿ ಸಮಾಪ್ತಿ ಗೊಂಡಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್, ಡಿವೈಎಸ್‌ಪಿ ಬಾಬು ಅಂಜನಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ಡಿಎಲ್‌ಓ ಡಾ.ಕಿರಣ್, ಟಿಹೆಚ್‌ಓ ಡಾ. ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರರಾದ ಹೇಮಂತರಾಜ್ ಅರಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಸುಬ್ಬಯ್ಯ ದಂತ ವೈದ್ಯಕೀಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.