ನೀಟ್ ಅಕ್ರಮ: ಮೋದಿ ಸರ್ಕಾರದ ಮೌನ ಖಂಡಿಸಿ ಯುವಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ : ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿಜೆಪಿ ಮೋದಿ ನೇತೃತ್ವದ ಸರ್ಕಾರ ಮನವಹಿಸಿರುವುದನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್‌ನಿಂದ ಸಂಸತ್ ಚಲೋ ಪ್ರತಿಭಟನೆ ನಡೆಸಲಾಯಿತು. ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದರು.
ಈ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ ಬಿ.ವಿ. ಶ್ರೀನಿವಾಸ್ ನೇತೃತ್ವ ವಹಿಸಿದ್ದರು. ಕರ್ನಾಟಕದಿಂದಲೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಯ ಯುವ ಕಾಂಗ್ರೆಸ್ ಜಿಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳು ಪದಾಧಿಕಾರಿಗಳು ಭಾಗಿಯಾಗಿದ್ದು ಶಿವಮೊಗ್ಗ ಜಿ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್, ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಗ್ರಾಮಾಂತರ ಯುವ ಕಾಂಗ್ರೆಸ್‌ನ ಅಧ್ಯಕ್ಷ ಈ.ಟಿ. ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್‌ನ ಎಸ್ ಕುಮಾರೇಶ್ ಇತರರು ಭಾಗವಹಿಸಿದ್ದರು.