ನ.೧೪: ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ…

CEO

ಶಿವಮೊಗ್ಗ : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಡಳಿತ ಹಾಗೂ ಜಿಪಂ ಶ್ರಯದಲ್ಲಿ ನ.೧೪ರಿಂದ ೧೬ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ೧೪ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟ ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಓ ಎನ್.ಹೇಮಂತ್ ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.೧೪ರಂದು ಸಂಜೆ ೫ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರು ಉಪಸ್ಥಿತರಿರುವರು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಎ ವಿಧಾನ ಪರಿಷತ್ ಮತ್ತು ವಿಧಾನಸಭಾ ಸದಸ್ಯರು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಆಗಮಿಸಲಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ, ಡಯಟ್ ಉಪನಿರ್ದೇಶಕಿ ಶ್ರೀಮತಿ ಬಿಂಬಾ ಕೆ.ಆರ್., ಡಿಡಿಪಿಐ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.