ಸೆ.೨೫ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸ ಬೇಕು. ರೈತರ ಸಾಲ ವಸೂಲಾತಿ ಕಿರುಕುಳ ನಿಲ್ಲಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸೆ.೨೫ರಂದು ಬೆ.೧೧ರಿಂದ ಸಂಜೆ ೪ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ರೈತಸಂಘದ ರಾಜಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಬರಗಾಲ ಕಾಲಿಟ್ಟಿದೆ. ರೈತರ ಬೆಳೆ ಒಣಗಿದೆ. ಹಲವು ಕಡೆ ಬಿತ್ತನೆಯೇ ಆಗಿಲ್ಲ. ರೈತರು ನಿರೀಕ್ಷೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇವಲ ೧೬೧ ತಾಲೂಕು ಗಳನ್ನು ಮಾತ್ರ ಬರಗಾಲ ಎಂದು ಘೋಷ ಣೆ ಮಾಡದೆ ಉಳಿದ ೭೪ ತಾಲೂ ಕುಗಳನ್ನೂ ಬರಗಾಲ ಎಂದು ಘೊ ಷಿಸಬೇಕೆಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ರೈತರ ಸಂಕ ಷ್ಟಗಳನ್ನು ಮರೆತಿದೆ. ಗ್ಯಾರಂಟಿ ಗಳೇ ಅವರಿಗೆ ಮುಖ್ಯವಾಗಿದೆ. ವಿರೋಧ ಪಕ್ಷಗಳು ತಮ್ಮ ಜವಾ ಬ್ದಾರಿ ಮರೆತಿವೆ. ಮುಂದಿನ ಲೋಕ ಸಭೆ ಚುನಾವಣೆಯ ಹವಣಿಕೆ ಯಲ್ಲಿದ್ದಾರೆ. ಇದರ ನಡುವೆ ಬ್ಯಾಂಕುಗಳು, ಫೈನಾನ್ಸ್‌ಗಳು ಸಾಲ ವಸೂಲಾತಿಗಾಗಿ ರೈತರಿಗೆ ಕರುಕುಳ ನೀಡುತ್ತಿವೆ. ರೈತ ನಿಜಕ್ಕೂ ಸಂಕಷ್ಟದಲ್ಲಿದ್ದಾನೆ. ಆತನ ನೆರವಿಗೆ ಸರ್ಕಾರ ತಕ್ಷಣ ಬರಬೇಕು ಎಂದು ಒತ್ತಾಯಿಸಿದರು.
ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಬೇಕು. ರೈತರಿಗೆ ಬೆಳೆ ಪರಿಹಾರವಾಗಿ ಎಕರೆಗೆ ೨೫ಸಾವಿರ ರೂ. ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ೭ ಗಂಟೆ ವಿದ್ಯುತ್ ನೀಡಬೇಕು. ಸುಟ್ಟು ಹೋದ ಟಿಸಿಗಳನ್ನು ತಕ್ಷಣ ಬದಲಿ ಸಬೇಕು. ರೈತರ ಎಲ್ಲಾ ರೀತಿಯ ಸಾಲ ವಸೂಲಾತಿಯನ್ನು ತಡೆ ಹಿಡಿಯ ಬೇಕು. ಸಾಲ ಮನ್ನಾ ಮಾಡಬೇಕು. ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಬೆಳೆ ವಿಮೆ ಪಡೆದು ಕೊಂಡ ಕಂಪೆನಿಗಳು ತಕ್ಷಣವೇ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಅವರು ಆಗ್ರ ಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪದಾ ಧಿಕಾರಿಗಳಾದ ಪಿ.ಡಿ.ಮಂಜಪ್ಪ, ಕೆ. ರಾಘವೇಂದ್ರ, ಎಸ್. ಶಿವಮೂರ್ತಿ, ಸಿ. ಚಂದ್ರಪ್ಪ, ಕಸೆಟ್ಟಿ ರುದ್ರೇಶ್ ಇದ್ದರು.