ಕಂಪ್ಯೂಟರ್ ಸೈನ್ಸ್ ನಲ್ಲಿ ಪಾರ್ವತಿ ರಾಜ್ಯಕ್ಕೆ ಫಸ್ಟ್; ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್‌ನಲ್ಲಿ ಸ್ಮೃತಿಗೆ ೯ನೇ ರ್‍ಯಾಂಕ್
ಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ೨೦೨೦-೨೩ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆಯುವುದರ ಜೊತೆಗೆ ಆರು ಚಿನ್ನದ ಪದಕಗಳನ್ನು ಪಡೆದಿzರೆ.
ಇದೇ ವೇಳೆ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ ೯ನೆ ರ್‍ಯಾಂಕ್ ಪಡೆದಿzರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿನಿಯರ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿzರೆ.