ಸುಗಮ – ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮಕ್ಕೆ ಪೂನಂ ಸೂಚನೆ
ಶಿವಮೊಗ್ಗ : ಲೋಕಸಭಾ ಚುನಾ ವಣೆಗೆ ಸಂಬಂಧಿಸಿದಂತೆ ಜಿ ಯಲ್ಲಿ ಸುಗಮ ಮತ್ತು ಶಾಂತಿ ಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು ೧೪-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ರ ಸಂಬಂಧ ಜಿಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರೋ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸ ಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
೧೪-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ ೧೧೧-ಶಿವಮೊಗ್ಗ ಗ್ರಾಮಾಂತರ, ೧೧೨-ಭದ್ರಾವತಿ, ೧೧೩-ಶಿವಮೊಗ್ಗ, ೧೧೪-ತೀರ್ಥಹಳ್ಳಿ, ೧೧೫-ಶಿಕಾರಿಪುರ, ೧೧೬ಸೊರಬ, ೧೧೭-ಸಾಗರ ಮತ್ತು ೧೧೮ ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದು ಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾ ನ ಆಗುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ವನ್ನು ಅಚ್ಚುಕಟ್ಟಾಗಿ ನಿರ್ವಹಿಸು ವಂತೆ ಸೂಚನೆ ನೀಡಿದರು.
ಪ್ರತಿ ಸಹಾಯಕ ಚುನಾವಣಾ ಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುzಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತು ಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್ ಪೋಸ್ಟ್‌ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ/ತಪಾಸಣೆ ಕೈಗೊಳ್ಳ ಬೇಕು.
ಪ್ರತಿ ಮನೆ ಮನೆಗಳಿಗೆ ತೆರಳಿ ಮತದಾರರ ಮಾಹಿತಿ ಸ್ಲಿಪ್‌ಗ ಳನ್ನು ವಿತರಿಸಬೇಕು. ವಿಶೇಷವಾಗಿ ದೂರದ ಹಳ್ಳಿ/ಪ್ರದೇಶಗಳಲ್ಲಿ ಸಮರ್ಪಕವಾಗಿ ವಿತರಣೆ ಮಾಡ ಬೇಕು. ಮತದಾರರ ಮಾಹಿತಿ ಸ್ಲಿಪ್ ವಿತರಣೆ ವೇಳೆ ಮತದಾರರ ಬೂತ್ ಮತ್ತು ಇತರೆ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸ ಬೇಕು.
ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂ ಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‌ಓಪಿ ಯಲ್ಲಿ ದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‌ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರ ಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿ ದಂತೆ ಇತರೆ ಮಾರ್ಗಸೂಚಿಗಳ ನ್ನು ಅನುಸರಿಸಬೇಕು ಎಂದರು.
ನಾನು ಭದ್ರಾವತಿ ಮತಕ್ಷೇತ್ರ ದಲ್ಲಿ ಸ್ಟ್ರಾಂಗ್ ರೂಂ, ವಲ್ನರಬಲ್, ಶ್ಯಾಡೋ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಿದ್ದು, ಇನ್ನುಳಿದ ಮತಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದ ಅವರು ಪ್ರತಿ ಮತಕ್ಷೇತ್ರಗಳ ಮತಗಟ್ಟೆಗಳು, ಮತದಾರರ ಪಟ್ಟಿ, ಕ್ರಿಟಿಕಲ್, ವಲ್ನರಬಲ್, ಪಿಡಬ್ಲ್ಯುಡಿ, ಸಖಿ, ಯುವ ಮತ ದಾರರ ಮತಗಟ್ಟೆಗಳ ಮಾಹಿತಿ, ಚೆಕ್‌ಪೋಸ್ಟ್, ವಶಕ್ಕೆ ಪಡೆಯ ಲಾದ ಅಕ್ರಮ ಹಣ, ಮದ್ಯದ ವಿವರ, ದಾಖಲಿಸಲಾದ ಪ್ರಕರಣ ಗಳು, ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲಾದ ತರಬೇತಿಗಳ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ಜಗರೂಕತೆಯಿ ಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‌ಪೋಸ್ಟ್‌ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.
ಡಿಸಿ ಗುರುದತ್ತ ಹೆಗಡೆ ಮಾತ ನಾಡಿ, ಎಲ್ಲ ಸಹಾಯಕ ಚುನಾವ ಣಾಧಿಕಾರಿಗಳು, ಎಫ್‌ಎಸ್‌ಟಿ, ಎಸ್‌ಎಸ್‌ಟಿ, ಇತರೆ ತಂಡಗಳು ಮತ್ತು ಸಮಿತಿಗಳ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಸುಗಮ ಮತ್ತು ಶಾಂತಿಯುತ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‌ಪಿ ಮಿಥುನ್ ಕುಮಾರ್, ಅಪರ ಜಿಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.