ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ…

vote

ಶಿವಮೊಗ್ಗ : ಜಿಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ ೭ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ ಮಾಧ್ಯಮದಲ್ಲಿ ಯಾವುದೇ ರೀತಿಯ ರಾಜಕೀಯ ಜಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಚುನಾವಣೆಯ ಕಡೆಯ ಹಂತ ದಲ್ಲಿ ಆಕ್ಷೇಪಾರ್ಹ ಮತ್ತು ತಪ್ಪುದಾರಿ ಗೆಳೆಯುವ ಜಹಿರಾತುಗಳನ್ನು ಪ್ರಕಟಿಸಿದಲ್ಲಿ ಚುನಾವಣಾ ಪ್ರಕ್ರಿಯೆ ಯನ್ನು ಹದಗೆಡಿಸುವ ಸಂಭವ ಇರುವ ಕಾರಣ ಮುದ್ರಣ ಮಾಧ್ಯಮಗಳಲ್ಲಿ ಚುನಾವಣಾ ಜಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಜಹಿರಾತು ಪ್ರಕಟಿಸುವ ಎರಡು ದಿನಗಳ ಮುಂಚಿತವಾಗಿ ಎಂಸಿಎಂಸಿಗೆ ಅರ್ಜಿ ಸಲ್ಲಿಸಬೇಕು.
ಮೇ ೬ ಮತ್ತು ೭ ರಂದು ಮುದ್ರಣ ಮಾಧ್ಯಮಗಳಲ್ಲಿ ಜಹೀರಾತು ಪ್ರಕಟಿಸಬೇಕಾದರೆ ಸದರಿ ಜಹೀರಾತಿನ ಎರಡು ಸ್ವಯಂ ದೃಢೀಕತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಜಹಿರಾತು ಪ್ರಕಟಿಸುವ ೨ ದಿನ ಮುಂಚಿತವಾಗಿ ಪೂರ್ವಾನುಮತಿ ಪಡೆಯಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಹೀರಾತು ಗಳನ್ನು ಪ್ರಕಟಿಸಲು ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಹೀರಾತುಗಳನ್ನು ಸ್ಥಳೀಯ, ಜಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ದಿನಪತ್ರಿಕೆಗಳು ಪ್ರಕಟಿಸ ಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಪೂರ್ವಾನುಮತಿಗೆ ಅರ್ಜಿ ಲಭ್ಯ:
ಮೇ ೬ ಮತ್ತು ೭ರಂದು ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹಿರಾತು ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೆಗ್ಗ ಈ ಕಚೇರಿಯಿಂದ ಪಡೆಯಬಹುದು.