ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಸಚಿವ ಡಿ. ಸುಧಾ ಕರ್ ಅವರ ರಾಜೀನಾಮೆಯನ್ನು ಈ ಕೂಡಲೇ ಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯ ಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಯಲಹಂಕದಲ್ಲಿ ದಲಿತರ ಭೂ ಕಬಳಿಕೆ ಹಾಗೂ ಜತಿ ನಿಂದನೆ ಆರೋಪದಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾದ ಹಿನ್ನೆಲೆಯಲ್ಲಿ ಈ ಕೂಡಲೇ ಸಚಿವ ಸುಧಾಕರ್ ಅವರ ರಾಜೀನಾಮೆ ಪಡೆಯ ಬೇಕು. ಅಲ್ಲದೆ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಟಿ.ಡಿ. ಮೇಘರಾಜ್, ಜಗದೀಶ್ ಎನ್. ಕೆ., ರತ್ನಾಕರ್ ಶೆಣೈ, ಮಾಲತೇಶ್ ಎನ್., ವಿಶ್ವಾಸ್, ಮೋಹನ್, ಹೆಚ್. ಶಿವಾಜಿ ಮುಂತಾದವರಿ ದ್ದರು.