ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ…

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಐತಿಹಾಸಿಕ ಭಾರತ್‌ಜೋಡೋ ಯಾತ್ರೆಯ ರೂವಾರಿ ರಾಹುಲ್ ಗಾಂಧಿಗೆ ೨ ವರ್ಷ ಜೈಲುಶಿಕ್ಷೆ ವಿಧಿಸಿ ಸೂರತ್ ಕೋರ್ಟ್ ತೀರ್ಪು ನೀಡಿದ ನಂತರ ಇಂದು ಲೋಕಸಭಾ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.
ರಾಹುಲ್ ಅಪರಾಧಿ ಹಿನ್ನೆಲೆ ಲೋಕಸಭೆ ಸ್ಪೀಕರ್ ನಿಯಮಾನುಸಾರ ವಯನಾಡು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಗಿದೆ. ಪ್ರಧಾನಿ ಮೋದಿ ಉಪನಾಮ ಹೇಳಿಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳ ಗಾದ ೨೪ ತಾಸಿನಲ್ಲಿ ಈ ಆದೇಶ ಪ್ರಕಟಗೊಂಡಿದ್ದು ಭಾರಿ ಸಂಚಲನ ಸೃಷ್ಠಿಸಿದೆ.
ಆರ್ಟಿಕಲ್ ೧೦೨(೧)(ಇ)ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹ ಗೊಳಿಸಲಾಗಿದೆ. ಭಾರತದ ಸಂವಿಧಾನವು ೧೯೫೧ರ ಪ್ರಜ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ ೮ ರೊಂದಿಗೆ ಹೇಳಿರುವಂತೆ ಈ ಕ್ರಮ ಜರಿಗೊಳಿಸಿದೆ ಎಂದು ಲೋಕಸಭೆಯ ಕಾರ್‍ಯದರ್ಶಿ ಹೊರ ಡಿಸಿದ ಅಸೂಚನೆಯಲ್ಲಿ ತಿಳಿಸಿದೆ.
ಮೋದಿ ಸಮುದಾಯಕ್ಕೆ ಅವ ಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿzರೆ. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲರೂ ದೇಶವನ್ನು ಲೂಟಿ ಮಾಡಿzರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.