ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕುಟುಂಬ – ಯುವತಿ ಸಾವು

ಬೆಂಗಳೂರು: ನಗರದಲ್ಲಿ ಕಾರ್ಮೋಡ ಕವಿದು ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ.
ಇಂದು ಮಧ್ಯಾಹ್ನವೇ ಇಡೀ ಬೆಂಗಳೂರು ಕತ್ತಲಿನಿಂದ ಆವೃತವಾಗಿತ್ತು. ಆಲಿಕಲ್ಲು ಮಳೆ, ಗಾಳಿಗೆ ಸಿಲುಕಿ ಸವಾರರ ತೊಂದರೆ ಅನುಭವಿಸಿದರು. ರಸ್ತೆಗಳ ಮೇಲೆ ಮಂಡಿಯುದ್ದದವರೆಗೆ ನೀರು ನಿಂತು ಹರಿಯಿತು.
ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿzರೆ.
ಅಂಡರ್ ಪಾಸ್‌ನಲ್ಲಿ ಮುಳುಗಡೆಯಾಗಿದ್ದ ಕಾರಿನಲ್ಲಿ ನಾಲ್ವರನ್ನು ರಕ್ಷಣೆ ಮಾಡಲಾಗಿತ್ತು, ಘಟನೆಯಲ್ಲಿ ಮಗು ಕಾu ಯಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ನಡುವೆ ಅಸ್ವಸ್ಥಗೊಂಡಿದ್ದ ಮಹಿಳೆ ಭಾನುರೇಖಾ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿzರೆ. ಸಿಎಂ ಸಿದ್ದರಾಮಯ್ಯ ಸೇಂಟ್ ಮಾರ್ಥಾಸ್‌ಗೆ ಭೇಟಿ ನೀಡಿದ್ದು, ಮಹಿಳೆ ಕುಟುಂಬಕ್ಕೆ ೫ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿzರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿzರೆ.
ಮೃತ ಮಹಿಳೆ ಕುಟುಂಬ ದವರು ಬೆಂಗಳೂರು ನೋಡಲು ವಿಜಯವಾಡ ದಿಂದ ಆಗಮಿಸಿದ್ದರು. ಇನ್ನು ಮಳೆಯ ಅವಾಂತರಕ್ಕೆ ಚಿಕ್ಕಮಗಳೂರಿನ ಮೂಡಿಗೆರೆಯ ಚಿಕ್ಕಳ್ಳ ಬಳಿ ಓರ್ವ ಬೈಕ್ ಸವಾರ ಬೃಹತ್ ಮರ ಬಿದ್ದ ಪರಿಣಾಮ ಸ್ಥಳದ ಮೃತಪಟ್ಟಿzರೆ.
ನಗರದಲ್ಲಿ ಧಾರಾಕಾರ ಮಹಿಳೆಯ ಪರಿಣಾಮ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ವಾಹನಗಳು ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ವಿಂಡ್ಸನ್ ಮ್ಯಾನರ್ ಸರ್ಕಲ್ ಬಳಿ ಕಬ್ಬಿಣದ ಕಾಂಪೌಂಡ್ ನೆಲಕ್ಕುರುಳಿದೆ. ಕಟ್ಟಡ ನಿರ್ಮಾಣ ಜಗದಲ್ಲಿ ಎತ್ತರದ ಕಾಂಪೌಂಡ್ ನಿರ್ಮಿಸಲಾಗಿತ್ತು. ಗಾಳಿ ಬೀಸಿದ ವೇಗಕ್ಕೆ ಕಬ್ಬಿಣ ತಗಡಗಳು ಬಿದ್ದಿವೆ. ಅದೇ ಜಗದಲ್ಲಿ ಕರೆಂಟ್ ಲೈನ್ ಮೇಲೆ ಬೃಹತ್ ಮರದ ಕೊಂಬೆ ಕೂಡ ಉರುಳಿ ಬಿದ್ದಿದೆ.
ಚಾಲುಕ್ಯ ಸರ್ಕಲ್‌ನಿಂದ ಹೆಬ್ಬಾಳ ಮಾರ್ಗದ ರಸ್ತೆ ಸಂಪೂರ್ಣ ಜಮ್ ಆಗಿದೆ. ಬಾಲಬೃಹಿ ಗೆಸ್ಟ್‌ಹೌಸ್ ಬಳಿ ರಸ್ತೆ ಕೆರೆಯಂತಾಗಿದೆ. ಬಸವನಗುಡಿಯ ಬುಲ್ ಟೆಂಪಲ್ ರೋಡ್‌ನಲ್ಲಿ ಮಳೆಗೆ ಮರ ಧರೆಗುರುಳಿದೆ. ಬೆಂಗಳೂರು ಹೈಸ್ಕೂಲ್ ಬಸ್ ಸ್ಟಾಂಪ್‌ನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ವಾಹನ ಸಂಖ್ಯೆ ಕಡಿಮೆ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಯಶವಂತಪುರ ಬಿಎಂಟಿಸಿ ಒಳಗೆ ಮಳೆ ನೀರು ನುಗ್ಗಿ ಹರಿಯುತ್ತಿದೆ. ಬಿಎಂಟಿಸಿ ಬಸ್‌ಸ್ಟ್ಯಾಂಡ್ ಮಳೆ ನೀರಿನಿಂದ ಆವೃತವಾಗಿದೆ. ಕೆ.ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕುಟುಂಬ ಮುಳುಗಿ ನೆರವಿಗೆ ಕೂಗಿಕೊಂಡ ಘಟನೆ ನಡೆಯಿತು. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಿಸಿzರೆ


ಆಂಧ್ರದಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬಸ್ಥರ ಆಕ್ರಂದನ:
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಇನ್ಫೋಸಿಸ್ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಮೃತಪಟ್ಟಿzರೆ. ಇವರು ಆಂಧ್ರದ ಕೃಷ್ಣ ಜಿಯ ತೇಲಾಪೋರಲು ಗ್ರಾಮದವರು. ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕಾಗಿ ಬಂದಿದ್ದರು.


ಘಟನೆ ವಿವಿರ: ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್‌ಬಾಗ್, ಕಬ್ಬನ್ ಪಾರ್ಕ್, ವಿಧಾನಸೌದ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು.
ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ನೀರು ತುಂಬಿತ್ತು. ತಿಳಿಯದೆಯೇ ಇವರು ಅಂಡರ್‌ಪಾಸ್ ಮುಖಾಂತರ ಹಾದುಹೋಗಲು ಕಾರು ಚಾಲನೆ ಮಾಡಿzರೆ. ನೀರು ತುಂಬಿದ್ದರಿಂದ ಕಾರು ಅ ಸಿಲುಕಿಕೊಂಡಿದೆ. ನಂತರ ಇವರು ಹೊರಬರಲು ಕಾರಿನ ಗ್ಲಾಸ್ ಇಳಿಸಿzರೆ. ಹೀಗೆ ಮಾಡುತ್ತಿದ್ದಂತೆ ನೀರು ಕಾರಿನೊಳಗಡೆ ನುಗ್ಗಿದೆ.
ಈ ವೇಳೆ ಭಾನುರೇಖಾ ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಲಿಲ್ಲ ಎಂದು ಕುಟುಂಬದವರು ಆರೋಪಿಸಿzರೆ. ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿzರೆ.
ಮೃತರ ಕುಟುಂಬಕ್ಕೆ ೫ ಲಕ್ಷ ಪರಿಹಾರ: ಸಿಎಂ
ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ ೫ ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿzರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿzರೆ. ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈeನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡ್ತೀವಿ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಎಂದು ವೈದ್ಯರು ಹೇಳುತ್ತಿzರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.