ಸಂಚಲನ ಮೂಡಿಸಿದ ರಾಜೀನಾಮೆ – ಅಭಿಮಾನಿಗಳ ಆಕ್ರೋಶ
ಶಿವಮೊಗ್ಗ: ಯಾರ ಒತ್ತಡಕ್ಕೆ ಮಣಿಯದೇ ನಾನು ಸ್ವಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದೇನೆ ಎಂದು ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಹೇಳಿzರೆ.
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಈಶ್ವರಪ್ಪ ಮಾತನಾಡಿದರು.
ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಇಲ್ಲಿಯ ವರೆಗೆ ಸಿಕ್ಕಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಸಿಗಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಲಕ್ಷಾಂತರ ಯುವಕರು ಕೆಲಸ ಮಾಡುತ್ತಿzರೆ. ನಾನು ಮತ್ತೆ ಪಕ್ಷ ಸಂಘಟನೆಯತ್ತ ಹೋಗುತ್ತೇನೆ. ರಾಜ್ಯದಲ್ಲಿ ಪೂರ್ಣ ಬಹುಮತ ತರುವುದರ ಜೊತೆಗೆ ಮತ್ತೆ ೨೦೨೪ರಲ್ಲಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.
ಈ ಬಾರಿ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಏ.೬ ಮತ್ತು ೭ ರಂದು ರಾಜ್ಯದ ಚುನಾವಣಾ ಸಮಿತಿ ನಡೆಸಿದ ಸಭೆಯಲ್ಲಿ ಕೇಂದ್ರ ನಾಯಕರ ಬಳಿ ತಿಳಿಸಿz. ಈ ವೇಳೆ ಅವರು ನೀವೇ ಸ್ಪರ್ಧೆ ಮಾಡಬೇಕು ಎಂದು ಹೇಳಿದ್ದರು. ಈಗ ಅಧಿಕೃತವಾಗಿ ಜೆಪಿ ನಡ್ಡಾ ಅವರಿಗೆ ಪತ್ರ ಬರೆದು ನನ್ನ ನಿರ್ಧಾರ ತಿಳಿಸಿದ್ದೇನೆ ಎಂದರು.
ಪುತ್ರ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿಲ್ಲ. ಕೇಂದ್ರ ಚುನಾವಣಾ ಸಮಿತಿ ಯಾವ ನಿರ್ಧಾರ ಕೈಗೊಳ್ಳುತ್ತದೋ ನೋಡಬೇಕಿದೆ. ನಾನು ಯಾರ ಪರವಾಗಿ ಟಿಕೆಟ್ ಕೇಳಿಲ್ಲ. ನಾನು ಕಳುಹಿಸಿದ ಪತ್ರವನ್ನು ನಮ್ಮ ಕಾರ್ಯಕರ್ತರು ಮೆಚ್ಚುತ್ತಾರೆ ಎಂದರು.
ಕಳೆದ ೪೦ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ- ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸಿದ ಈಶ್ವರಪ್ಪ, ಅಭಿಮಾನಿಗಳು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ವಿರೋಧಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡದಂತೆ ಈಶ್ವರಪ್ಪ ಅಭಿಮಾನಿಗಳು ಆಗ್ರಹಿಸಿದರು. ಈಶ್ವರಪ್ಪ ಅವರೇ ಈ ಬಾರಿಯೂ ಸ್ಪರ್ಧಿಸಬೇಕು. ಈಶ್ವರಪ್ಪ ಇಲ್ಲದೇ ಚುನಾವಣೆ ಹೇಗೆ ಮಾಡುತ್ತಾರೆ ಎಂದು ಸವಾಲೆಸೆದ ಈಶ್ವರಪ್ಪ ಅವರ ಅಭಿಮಾನಿಗಳು ಯುವ ಮುಖಂಡ ಕೆ.ಈ. ಕಾಂತೇಶ್ ಅವರಿಗೆ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿ, ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.