ಸೆ.೬: ಶ್ರೀ ಕೃಷ್ಣ ಜಯಂತಿ
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೆ.೬ ರಂದು ಶ್ರೀ ಕೃಷ್ಣ ಜಯಂತಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಅಂಜ ನಪ್ಪ ತಿಳಿಸಿದರು.
ಇಂದು ಪ್ರೆಸ್‌ಟ್ರಸ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆ ಯುವ ಕಾರ್‍ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾ ರಪ್ಪ ಉದ್ಘಾಟಿಸುವರು. ವಿಶೇಷ ಆಹ್ವಾನಿತರಾಗಿ ಸಚಿವರಾದ ಶಿವ ರಾಜ್ ತಂಗಡಗಿ ಮತ್ತು ಡಿ.ಸುಧಾ ಕರ್ ಪಾಲ್ಗೊಳ್ಳುವರು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸ ಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್‍ಯಕ್ರಮಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ಭವ್ಯ ಮೆರವಣಿಗೆಯನ್ನು ಹಮ್ಮಿ ಕೊಳ್ಳಲಾಗಿದೆ. ಮೆರವಣಿಗೆ ಮತ್ತು ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿ ಕೊಂಡರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ದೇವೇಂದ್ರಪ್ಪ, ರಾಜು, ಮೋಹನ್, ಶಿವಾನಂದಪ್ಪ ಮತ್ತಿತರರು ಉಪಸ್ಥಿತರಿದ್ದರು.