ಶಿವಮೊಗ್ಗ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಮನೆ, ಭದ್ರಾವತಿಯಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂ ಎಸಿ ಸಹಯೋಗ ದಲ್ಲಿ ಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ ವ್ಯವಸ್ಥೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾ ಲಕ ಕುಮಾರ.ಎನ್ ರವರು ಕಾರ್‍ಯ ಕ್ರಮಕ್ಕೆ ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮದ ಪ್ರಸ್ತು ತತೆಯನ್ನು ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐ ಕ್ಯೂ ಎಸಿ ಸಂಚಾಲಕರಾದ ಡಾ. ಪ್ರಸನ್ನ ಟಿ ರವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳ ಸದುಪಯೋಗ ಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗ ಮಿಸಿದ್ದ ಡಾ. ಭಾರತಿ ಟಿ ಸಿ ಸಹ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನ್ಯಾಮತಿ ಇವರು ಕುವೆಂಪು ನಾಟಕಗಳು ಮತ್ತು ಸಾಮಾಜಿಕ ಶ್ರೇಣಿಕರಣ ವ್ಯವಸ್ಥೆ ಎಂಬ ವಿಷಯದ ಕುರಿತು ಸವಿಸ್ತಾ ರವಾದ ಮಾಹಿತಿ ನೀಡಿದರು.
ಕುವೆಂಪುರವರು ಪ್ರತಿಪಾದಿ ಸಿದ ವೈಚಾರಿಕ ತತ್ವಗಳನ್ನು ನಾವೆ ಲ್ಲರೂ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾದ ಡಾ. ಮಂಜುನಾಥ್ ಸಕ ಲೇಶ್ ರವರು ಕುವೆಂಪು ಸಾಹಿತ್ಯ ಮತ್ತು ವಿಚಾರಗಳು ಹಿಂದಿಗಿಂ ತಲೂ ಇಂದು ಹೆಚ್ಚು ಪ್ರಸ್ತುತವಾಗಿ ರುವುದರ ಕುರಿತು ವಿವರಿಸಿದರು.
ವರ್ಷಿತ್ ಕುಮಾರ್ ಕಾರ್ಯ ಕ್ರಮವನ್ನು ನಿರೂಪಿಸಿದರು. ಶಾರದ ಮತ್ತು ಸಂಗಡಿಗರು ಪ್ರಾ ರ್ಥಿಸಿದರು. ಅಶ್ವತ್ ಸರ್ವರಿಗೂ ವಂದಿಸಿದರು. ಕಾರ್ಯಕ್ರಮದಲ್ಲಿ ೭೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ಮತ್ತು ಬೋಧ ಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.