ಕಾನೂನು-ಸುವ್ಯವಸ್ಥೆ ಕಾಪಾಡಲು ದಿಟ್ಟ ನಿರ್ಧಾರ ತೆಗೆದುಕೊಳ್ಳಿ : ಅಬ್ದುಲ್

ಶಿವಮೊಗ್ಗ : ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವು ದಕ್ಕಾಗಿ ಅಧಿಕಾರಿಗಳು ದಿಟ್ಟ ಮತ್ತು ಕಠಿಣವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೊ ಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ರವರು ತಿಳಿಸಿದರು.
ಶಿವಮೊಗ್ಗ ಜಿಯಲ್ಲಿನ ಕೋಮು ಸೌಹಾರ್ದತೆ ಕುರಿತು ಜಿಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡಿದ ಅವರು ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಉಂ ಟಾದ ಕಲ್ಲು ತೂರಾಟ ಪ್ರಕರಣ ನಿಜಕ್ಕೂ ಒಂದು ಕೆಟ್ಟ ಘಟನೆ. ಘಟನೆ ಆದಾಗಿನಿಂದ ಜಿ ಪೊ ಲೀಸ್ ವರಿಷ್ಟಾಧಿಕಾರಿಗಳು ಮತ್ತು ಜಿಧಿಕಾರಿಗಳ ಸಂಪರ್ಕದಲ್ಲಿ ಇದ್ದು, ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಘಟನೆ ಸಂಭವಿಸಿದ ಕೆಲವೇ ಗಂಟೆ ಗಳಲ್ಲಿ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿರುವುದು ಉತ್ತಮ ಕಾರ್ಯ. ಈ ಘಟನೆಗೆ ಸಂಬಂಧಿಸಿದಂತೆ ೫೦ ರಿಂದ ೬೦ ಜನರನ್ನು ಬಂಧಿಸಿ, ೩೨ ಪ್ರಕರಣಗಳನ್ನು ದಾಖಲಿಸಿ ಕ್ರಮ ವಹಿಸಲಾಗಿದೆ.
ಆದರೆ ಈ ರೀತಿಯ ಘಟನೆ ಗಳು ಸಂಭವಿಸದಂತೆ ಅಧಿಕಾರಿಗಳು ದಿಟ್ಟ ನಿಲುವುಗಳನ್ನು ತಳೆಯ ಬೇಕು. ಧಾರ್ಮಿಕ ಮೆರವಣಿಗೆ ವೇಳೆ ಬಹಳ ಕಟ್ಟುನಿಟ್ಟಾದ ಷರತ್ತು ಗಳನ್ನು ವಿಧಿಸಿ ಅನುಮತಿಯನ್ನು ನೀಡಬೇಕು.ಅಂತಹ ಮೆರವಣಿಗೆ/ಕಾರ್ಯಕ್ರಮಗಳಿಂದ ಕಾನೂ ನು,ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾ ಗುವುದು ಎಂದು ಕಂಡು ಬಂದರೆ ಅನುಮತಿಯನ್ನು ನೀಡಲೇಬಾ ರದು.ಪ್ರಚೋದನಾಕಾರಿ ಕಟ್ ಔಟುಗಳು, ಬ್ಯಾನರ್‍ಗಳು, ಫ್ಲೆಕ್ಸ್‌ಗ ಳನ್ನು ಹಾಕುವುದಕ್ಕೆ ಅವಕಾಶ ನೀಡಬಾರದು. ಹಾಕಲೇಬೇಕಾದರೆ ಒಬ್ಬ ದಕ್ಷ ಅಧಿಕಾರಿಯನ್ನು ಅದ ಕ್ಕಾಗಿ ನೇಮಿಸಿ ಆತ ಎಲ್ಲ ಬ್ಯಾನರ್, ಕಟ್‌ಔಟ್‌ನ್ನು ಪರಿಶೀಲಿಸಿ ಯಾವು ದೇ ರೀತಿಯ ಪ್ರಚೋದನಕಾರಿ ಅಂಶಗಳಿಲ್ಲ, ತೊಂದರೆ ಇಲ್ಲವೆಂ ದು ವರದಿ ನೀಡಿದ ನಂತರವೇ ಅನುಮತಿಯನ್ನು ನೀಡಬೇಕು.
ಜಿಯಲ್ಲಿ ಕೋಮು ಸೂಕ್ಷ್ಮ ತೆಯುಳ್ಳ ಪ್ರದೇಶಗಳನ್ನು ಗುರುತಿಸಿ ಅಲ್ಲಿಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಮಿತಿ ಗಳನ್ನು ರಚಿಸಿ, ಸೌಹಾರ್ದತೆ, ಶಾಂತಿ ತರಲು ಪ್ರಯತ್ನಿಸಬೇಕು. ಶಾಂತಿ ಸಭೆಗಳನ್ನು ಕೇವಲ ಠಾಣಾ ವ್ಯಾಪ್ತಿಯಲ್ಲಿ ಮಾಡಿದರೆ ಸಾಲ ದು. ಸೂಕ್ಷ್ಮವಾದ ಮೊಹಲ್ಲಗ ಳನ್ನು, ಸಮುದಾಯಗಳನ್ನು ಗುರುತಿಸಿ, ಸಮಿತಿಗಳನ್ನು ರಚಿಸಿ ಜವಾಬ್ದಾರಿ ನೀಡಬೇಕು.
ಸೂಕ್ಷ್ಮ ಪ್ರದೇಶಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಿಸಬೇಕು. ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಉಂಟಾ ಗುವ ಸಂದರ್ಭ ಎದುರಾಗಬಹು ದೆಂದು ಕಂಡು ಬಂದಲ್ಲಿ ಪಕ್ಷಾತೀತ, ಜತ್ಯಾತೀತವಾಗಿ ಕಠಿಣ ನಿಲು ವುಗಳನ್ನು ಕೈಗೊಂಡು ಶಾಂತಿಯ ನ್ನು ಸ್ಥಾಪಿಸಬೇಕೆಂದರು. ಹಾಗೂ ಸಾಮರಸ್ಯ ಸಾಧಿಸಲು, ಜನರ ವಿಶ್ವಾಸ ಗಳಿಸಲು ಅಧಿಕಾರಿಗಳು ಹೊಸ ವಿಧಾನಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಸಲಹೆ ನೀಡಿ ದರು.
ರಾಗಿಗುಡ್ಡ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಇನ್ನೂ ಅಲ್ಲಿ ಸೆಕ್ಷನ್ ೧೪೪ ಜರಿಯಲ್ಲಿದೆ. ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿzರೆ. ಶಿವಮೊಗ್ಗ ಜಿಯಲ್ಲಿ ಮುಂದೆ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ಸಂಭವಿಸುವುದಿಲ್ಲವೆಂಬ ವಿಶ್ವಾಸವಿ ದೆ ಎಂದ ಅವರು ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿ ದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೊ ಜ್, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬು ಜಫಾರಿ, ಜಿಧಿಕಾರಿ ಡಾ.ಸೆಲ್ವಮಣಿ ಆರ್, ಜಿ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಜಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರೀತಿ, ಪೊಲೀಸ್ ಮತ್ತು ಕಂದಾ ಯ ಇಲಾಖೆಯ ಆರಕ್ಷಕರು, ಇತರರು ಹಾಜರಿದ್ದರು.