ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಿ..
ಶಿವಮೊಗ್ಗ : ಜಿಯಲ್ಲಿ ನಿರೀಕ್ಷೆಯಂತೆ ಇಂದಿನವರೆಗೆ ವಾಡಿಕೆ ಪ್ರಮಾಣದ ಮಳೆ ಬಾರದ ಹಿನ್ನೆಲೆಯಲ್ಲಿ ಜಿಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಪೂರೈಸಲು ನೀರಿನ ಕೊರತೆ ಉಂಟಾಗಬಹುದಾದ ಸಾಧ್ಯತೆ ಇದ್ದು, ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯವಿರುವ ಎ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬರ, ಪ್ರಕೃತಿ ವಿಕೋಪ, ಕೃಷಿ ಚಟುವಟಿಕೆ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಅಧಿಕಾರಿ ಗಳೊಂದಿಗೆ ಸಮಾಲೋಚನೆ ನಡೆಸಿ, ವಿವಿಧ ಕ್ಷೇತ್ರಗಳ ಸ್ಥಿತಿಗಳ ಮಾಹಿತಿ ಪಡೆದು ಮಾತನಾಡುತ್ತಿದ್ದ ಸಚಿವರು, ಜಿಯ ವಿವಿಧ ತಾಲೂಕುಗಳಲ್ಲಿ ಸುಮಾರು ಇನ್ನೂ ೨೦ದಿನಗಳಿಂದ ಒಂದು ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಈ ಅವಧಿಯಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಈಗಾಗಲೇ ಜಿಯ ೮೦-೯೦ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವುದನ್ನು ಗುರುತಿಸ ಲಾಗಿದೆ. ಪ್ರಸ್ತುತ ೨೫ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದರು.
ಜಿಯಲ್ಲಿ ಆಗಾಗ್ಗೆ ಅತಿವೃಷ್ಠಿ, ಅನಾವೃಷ್ಠಿಗೊಳಗಾಗುವ ಪ್ರದೇಶಗಳಲ್ಲಿ ಶಾಶ್ವತ ಸುರಕ್ಷತಾ ಕ್ರಮ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ ಸಚಿವರು, ಪ್ರಕೃತಿ ವಿಕೋಪದ ಸಂತ್ರಸ್ಥರಿಗೆ ಮಾನವೀಯ ನೆಲೆಯಲ್ಲಿ ಪರಿಹಾರ ಹಾಗೂ ವೈದ್ಯಕೀಯ ನೆರವನ್ನು ಒದಗಿಸುವಂತೆ ಹಾಗೂ ವಾಸ್ತವ ಸ್ಥಿತಿಗತಿಗಳನ್ನು ಅರಿತು ಪಕ್ಷಾತೀತ ವಾಗಿ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಸೇರಿದಂತೆ ಜಿ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.