ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಬಿವೈಆರ್

0
byr-(1)

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರು ಯುವಜನ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವರಾದ ಶ್ರೀಮತಿ ರಕ್ಷಾ ನಿಖಿಲ್ ಖಡ್ಸೆಯವ ರನ್ನು ಭೇಟಿ ಮಾಡಿ ಚರ್ಚಿಸಿದರು.
ಶಿವಮೊಗ್ಗದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಹಿಂದೆ ಖೇಲೋ ಇಂಡಿಯಾ ಯೋಜನೆಯಡಿ ರೂ ೧೧.೮೩ ಕೋಟಿ ಅನುದಾನವನ್ನು ಒದಗಿಸಲಾಗಿದ್ದು, ಸದರಿ ಅನುದಾನವನ್ನು ಕಾರಣಾಂತರ ದಿಂದ ಹಿಂದಕ್ಕೆ ಪಡೆಯಲಾಗಿದ್ದು, ಸದರಿ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸಿ ಕೇಂದ್ರ ಸರ್ಕಾರದಿಂದ ಖೇಲೋ ಇಂಡಿಯಾ ಯೋಜನೆ ಯಡಿಯಲ್ಲಿ ಶಿವಮೊಗ್ಗ ನಗರದಲ್ಲಿರುವ ಬಹು ಒಳಾಂಗಣ ಕ್ರೀಡಾ ವಿಭಾಗಗಳನ್ನು ಉತ್ತೇಜಿಸಲು ಹಾಗೂ ಒಳಾಂಗಣ ಕ್ರೀಡಾ ಸಭಾಂಗಣವು ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಅದನ್ನು ಪುನರುಜ್ಜೀವನಗೊಳಿಸಲು, ಮತ್ತು ಹೆಚ್ಚುವರಿಯಾಗಿ, ಖೇಲೋ ಇಂಡಿಯಾ ಯೋಜನೆಯಡಿ ಅಂತರ ರಾಷ್ಟ್ರೀಯ ಗುಣಮಟ್ಟದ ೨೦೦ ಮೀಟರ್ ಸಿಂಥೆಟಿಕ್ ಸ್ಕೇಟಿಂಗ್ ರಿಂಕ್ ಮಂಜೂರು ಮಾಡುವಂತೆ ಮನವಿ ಮಾಡಿದರು.
ಸಂಸದ ಬಿವೈಆರ್ ಮನವಿಗೆ ಸ್ಪಂದಿಸಿದ ಸಚಿವರು ಅನುದಾನವನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರದ ಹಾಗೂ ಶಿವಮೊಗ್ಗ ಕ್ಷೇತ್ರದ ಕ್ರೀಡಾ ಸ್ವರೂಪವನ್ನು ಬದಲಾಯಿಸುವ ಕ್ರಮವು ಬಹಳ ಆಶಾದಾಯಕ ವಾಗಿದ್ದು, ಮುಂದಿನ ದಿನಗಳಲ್ಲಿ ಜಿಯ ಕ್ರೀಡಾಸಕ್ತರಿಗೆ ಒಳ್ಳೆಯ ಸಂತಸ ದಿನಗಳು ಬರಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರರವರು ತಿಳಿಸಿzರೆ.

Leave a Reply

Your email address will not be published. Required fields are marked *