ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್: ಮೂವರು ಆರೋಪಿಗಳ ಬಂಧನ

railway-arrested

ಶಿವಮೊಗ್ಗ : ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿ ಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್‌ಪೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್‌ರ ವಿರುದ್ಧ ದಾಳಿ ನಡೆಸಿ ೩ ಆರೋಪಿಗಳನ್ನು ಬಂಧಿಸಲಾಗಿದೆ.
ವಿಶೇಷ ದಾಳಿ ವೇಳೆ ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್‌ನ ಗಣೇಶ್ ರಾಮ್ ನಾಯಕ್(೩೧), ಶ್ರೀ ಸಂವಹನ ಮೊಬೈಲ್ ಮಾರಾಟ ಮಳಿಗೆಯ ರೇವಣ್ಣಪ್ಪ (೩೬) ಮತ್ತು ಆರ್ಯ ಸೈಬರ್ ವಲಯದ ಪ್ರಶಾಂತ್ ಹೆಗಡೆ (೪೬) ಎಂಬುವರನ್ನು ಬಂಧಿಸಲಾಗಿದೆ.
ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆ ಯನ್ನು ತಡೆಯುವ ಉದ್ದೇಶದಿಂದ ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಪೋರ್ಸ್ ವತಿಯಿಂದ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್ ವಿರುದ್ಧ ಯೋಜನೆ ರೂಪಿಸಿದೆ.
ಐಆರ್‌ಪಿಎಫ್‌ಎಸ್‌ನ ವಿಭಾಗೀಯ ಭದ್ರತಾ ಆಯುಕ್ತ ಜೆ ಕೆ ಶರ್ಮಾ ಅವರು, ಮೈಸೂರು ಆರ್‌ಪಿಎಫ್ ಇವರ ನಿರ್ದೇಶನದಂತೆ, ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ತಂಡದಲ್ಲಿ ಅಪರಾಧ ನಿರೀಕ್ಷಕ ಎಂ.ನಿಶಾದ್, ಸಬ್ ಇನ್ಸ್‌ಪೆಕ್ಟರ್ ಬಿ. ಚಂದ್ರಶೇಖರ್, ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳಾದ ವೆಂಕಟೇಶ್ ಮತ್ತು ಈಶ್ವರ್‌ರಾವ್, ಹೆಡ್ ಕಾನ್‌ಸ್ಟೆಬಲ್ ಡಿ ಚೇತನ್ ಮತ್ತು ಸಿಬ್ಬಂದಿಗಳಿಂದ ಶಿವಮೊಗ್ಗದ ವ್ಯಾಪ್ತಿಯಲ್ಲಿ ಸೆ.೪ ರಂದು ಬೃಹತ್ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಯಿತು.
ಮೂರು ಸೈಬರ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಅನಧಿಕೃತ ಟಿಕೆಟಿಂಗ್ ಬುಕ್ ಮಾಡುವ ಗ್ಯಾಂಗ್‌ಗಳನ್ನು ಪತ್ತೆ ಹಚ್ಚಲಾಯಿತು. ಪ್ರಯಾಣಿಕರಿಗೆ ವಿಪರೀತ ಶುಲ್ಕ ವಿಧಿಸುವ ಮೂಲಕ ಇ-ಟಿಕೆಟ್‌ಗಳನ್ನು ಉತ್ಪಾದಿಸಲು ಬಳಸುತ್ತಿದ್ದ ಒಟ್ಟು ರೂ ೨.೫ ಲಕ್ಷ ಮೌಲ್ಯದ ರೈಲ್ವೆ ಇ-ಟಿಕೆಟ್‌ಗಳು ಮತ್ತು ೧.೨೫ ಲಕ್ಷಕ್ಕೂ ಹೆಚ್ಚು ಮೌಲ್ಯದ ಕಂಪ್ಯೂಟರ್, ಪ್ರಿಂಟರ್, ಮೊಬೈಲ್ ಫೋನ್‌ಗಳಂತಹ ಗ್ಯಾಜೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ಹಬ್ಬ ಹರಿದಿನದಂತಹ ಒತ್ತಡದ ಸಮಯದಲ್ಲಿ ಬೇರೆ ಬೇರೆ ಪೋನ್ ಸಂಖ್ಯೆಗಳಿಗೆ ಲಿಂಕ್ ಆದ ಬಹುವ್ಯಕ್ತಿ ಐಡಿಗಳನ್ನು ಸೃಜಿಸುವುದು ಮತ್ತು ಅನಧಿಕೃತ ವಾಗಿ ಇ-ಟಿಕೆಟ್ ಜನರೇಟ್ ಮಾಡಿ ಜನರಿಂದ ಹೆಚ್ಚಿನ ಕಮಿಷನ್‌ನನ್ನು ಚಾರ್ಜ್ ಮಾಡುವುದು ಈ ಗ್ಯಾಂಗ್‌ಗಳ ಕೆಲಸವಾಗಿದೆ. ಆದ್ದರಿಂದ ಮೈಸೂರು ರೈಲ್ವೆ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಶಿಲ್ಪಿ ಅಗರ್ವಾಲ್, ಐಆರ್‌ಎಸ್, ಇವರು, ರೈಲ್ವೆ ಪ್ರಯಾಣಿಕರನ್ನು ಗುರಿಯಾಗಿಸುವ ಅನಧಿಕೃತ ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಇಂತಹ ಬೃಹತ್ ದಾಳಿಗಳನ್ನು ಮುಂದುವರಿಸಲಾಗುವುದು ಮತ್ತು ಪ್ರಯಾಣಿಕರಿಗೆ ಆಗುವ ಅನಾನುಕೂಲದಿಂದ ರಕ್ಷಿಸಲು ಎ ಪ್ರಯತ್ನಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿzರೆ. ಇಂತಹ ಟ್ರಾವೆಲ್ ಏಜೆಂಟ್‌ಗಳೊಂದಿಗೆ ಜಗರೂಕರಾಗಿರಿ ಮತ್ತು ಅವರ ದುರಾಸೆಗೆ ಬೀಳದಂತೆ ಪ್ರಯಾಣಿಕರಿಗೆ ಎಚ್ಚರಿಸಿzರೆ.