ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಗೃತಿ ಜಾಥ…

aids.jpeg

ಶಿವಮೊಗ್ಗ : ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿ ತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಡಿಸಿ ಡಾ. ಸೆಲ್ವಮಣಿ ತಿಳಿಸಿದರು.


ಅವರು ಇಂದು ಜಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಡಳಿತ, ಜಿಪಂ, ಜಿ ಪೊಲೀಸ್ ಇಲಾಖೆ ಮತ್ತು ಜಿ ಆರೋಗ್ಯ ಇಲಾಖೆ, ಐಎಂಎ, ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಜಿ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿ ವಕೀಲರ ಸಂಘ, ಜಿ ವಾರ್ತಾ ಇಲಾಖೆ, ನ್ಯಾಷನಲ್ ಲಾ ಕಾಲೇಜ್ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಏರ್ಪಡಿಸಿದ್ದ ಸಮುದಾಯಗಳು ಮುನ್ನಡೆಸಲಿ ಜಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತದಲ್ಲಿ ಏಡ್ಸ್ ೧೯೮೬ ರಲ್ಲಿ ಮೊದಲು ಕಾಣಿಸಿಕೊಂಡಿತು. ೪೦ ಲಕ್ಷ ಜನರು ಈ ಸೋಂಕಿಗೆ ತುತ್ತಾಗಿzರೆ. ಇದಕ್ಕೆ ಸೂಕ್ತವಾದ ಔಷಧವನ್ನು ವೈದ್ಯ ವಿeನಿಗಳು ಕಂಡುಹಿಡಿಯಲು ಸದಾ ಪ್ರಯತ್ನ ಮಾಡುತ್ತಿzರೆ. ಮುಖ್ಯವಾಗಿ ಜನರಲ್ಲಿ ಏಡ್ಸ್ ಕುರಿತು ಅರಿವು ಮತ್ತು ಜಗೃತಿ ಮೂಡಿಸಬೇಕು. ಆಗ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ ಎಂದು ಅವರು ಹೇಳಿದರು.
ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಮಾತನಾಡಿ, ಏಡ್ಸ್ ಎಂಬ ಮಾರಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಕ್ಕೆ ಪೀಡಿತರಾದವರನ್ನು ಮತ್ತು ಅವರ ಕುಟುಂಬದ ಸದಸ್ಯರನ್ನು ನಾವು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ಈ ಜಥಾದ ಮುಖ್ಯ ಉದ್ದೇಶ. ಎ.ಆರ್.ಟಿ ಚಿಕಿತ್ಸೆಯನ್ನು ಪಡೆಯುವುದರಿಂದ ಜೀವನವನ್ನು ಸುಧಾರಿಸಿಕೊಳ್ಳಬಹುದು. ೨೦೨೩ ರೊಳಗೆ ಏಡ್ಸ್‌ನ್ನು ಸಂಪೂರ್ಣ ವಾಗಿ ನಿಯಂತ್ರಣ ಮಾಡಬೇಕು ಎಂದು ಹೇಳಿದರು.
ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ ೨೦೨೩ರ ವೇಳೆಗೆ ಹೆಚ್.ಐ.ವಿ ಮತ್ತು ಏಡ್ಸ್ ಪ್ರಕರಣ ಸೊನ್ನೆ ಆಗಬೇಕು. ಯಾವುದೇ ಸಮಸ್ಯೆ ಯನ್ನು ಆಲಸ್ಯ ಮಾಡಬಾರದು ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿ ಗಳಲ್ಲಿ ಜಗೃತಿ ಮೂಡಿಸುವ ನಿಟ್ಟಿನಲ್ಲಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜ್ ಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಅರಿವು ಮೂಡಿಸಬಹುದು. ಜಿಯಲ್ಲಿ ಹೆಚ್.ಐ.ವಿ ಮತ್ತು ಏಡ್ಸ್ ಕುರಿತು ಜಗೃತಿ ಮೂಡಿಸಲು ೪೨ ರೆಡ್ ರಿಬ್ಬನ್ ಕ್ಲಬ್‌ಗಳು ಸ್ಥಾಪನೆ ಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೆಚ್.ಐ.ವಿ ಮತ್ತು ಏಡ್ಸ್ ಕುರಿತು ಕೆಲಸ ನಿರ್ವಹಿಸುತ್ತಿರುವವರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಜಿ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ದಿನೇಶ್ ಜಿ.ಸಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ರಮೇಶ್ ಸಿ, ಸಿದ್ಧನಗೌಡ, ರವಿಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿಯವರು ಮತ್ತಿತರರು ಉಪಸ್ಥಿತರಿದ್ದರು.