ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

abvp

ಶಿವಮೊಗ್ಗ : ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಗಳನ್ನು ಸರಿಪಡಿಸಲು ಆಗ್ರಹಿಸಿ ಜಿ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಇಂದು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ವಿದ್ಯಾರ್ಥಿಗಳ ಸಮಸ್ಯೆಗಳು ಸಾಕಷ್ಟಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದುವರೆಗೂ ಬಸ್ ಪಾಸ್ ಸಿಕ್ಕಿಲ್ಲ. ಅಲ್ಲದೆ ಬಸ್ ಗಳ ಸಂಖ್ಯೆಯೂ ಕೂಡ ಕಡಿಮೆ ಇದೆ. ಹಾಗೆಯೇ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆಯಲ್ಲಿ ವಿಳಂಬವಾಗುತ್ತಿದೆ. ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ. ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಹಾಕಿ ಕಾಯುತ್ತಿzರೆ ಎಂದು ಪ್ರತಿಭಟನಕಾರರು ದೂರಿದರು.
ವಿದ್ಯಾರ್ಥಿ ವೇತನವನ್ನೇ ನಂಬಿ ವ್ಯಾಸಂಗ ಮಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾ ಗಿದೆ. ಇದರ ಜೊತೆಗೆ ಕಾರ್ಮಿ ಕರ ಮಕ್ಕಳ ವಿದ್ಯಾರ್ಥಿ ವೇತನ ರದ್ದುಗೊಳಿಸ ಲಾಗಿದೆ. ರೈತ ವಿದ್ಯಾ ನಿಧಿಯೂ ಕೂಡ ಇಲ್ಲ ವಾಗಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎ ವಿಶ್ವವಿದ್ಯಾ ನಿಲಯಗಳಲ್ಲಿ ಏಕರೂಪ ವೇಳ ಪಟ್ಟಿಯನ್ನು ಸಮರ್ಪಕವಾಗಿ ಜರಿಗೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪ್ರಮುಖರಾದ ಹೆಚ್.ಕೆ. ಪ್ರವೀಣ್, ಪುನೀತ್, ಅಭಿಷೇಕ್, ರವಿ, ಸಿಂಚನ, ಯಶಸ್ವಿನಿ, ರಂಜನಿ, ವರುಣ್, ತರುಣ್, ತೇಜಸ್ಸು, ಮನೋಜ್, ಲೋಹಿತ್, ಪ್ರಮೋದ್, ಆಶ್ರಿತೆ, ರೋಹಿತ್ ಮುಂತಾದವರು ಇದ್ದರು.